Index   ವಚನ - 488    Search  
 
ಬಿಂದಿನ ಕೊಡನ ಹೊತ್ತಾಡುವ ಅಂಗನೆವೊಂದಾಗಿ ಹುಟ್ಟಿದರೈವರು ಚಂದ ಚಂದದ ಮನೆಯ ರಚಿಸಿ ಅಲ್ಲಿ ಸರ್ವರ ಒಂದುಗೂಡುವುದ ಕಂಡೆನಯ್ಯಾ. ಬಿಂದಿನ ಕೊಡ ತುಳುಕಿ ಚಂದ್ರಾಮೃತವೊಗಲು ಚಂದಚಂದದ ಮನೆಯಳಿದು ಒಂದಾಗಿ ಹುಟ್ಟಿದವರೈವರು ಒಬ್ಬನ ನೆರೆದು ನಿಬ್ಬೆರಗಾದುದ ಕಂಡು ನಾನು ಬೆರಗಾದೆನು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.