Index   ವಚನ - 502    Search  
 
ಒಬ್ಬನಿಗಿಬ್ಬರು ಸ್ತ್ರೀಯರು ನೋಡಾ, ಒಬ್ಬಳು ಕಾಯದ ರೂಪೆಯಾಗಿ ಕಾಯವ ಶುದ್ಧವ ಮಾಡುವಳು. [ಆ]ಕಾಯದ ಗುಣವ ಹೊದ್ದಳು ನೋಡಾ. ಮತ್ತೊಬ್ಬಳು ಪ್ರಾಣದ ರೂಪೆಯಾಗಿ ಪ್ರಾಣವ ಶುದ್ಧವ ಮಾಡುವಳು; ಆ ಪ್ರಾಣನ ಗುಣವ ಹೊದ್ದಳು ನೋಡಾ. ಇಬ್ಬರ ಸಂಗದಿಂದ ತಾನೊಬ್ಬ ಸಾಯಲು ಮೂರುಲೋಕದ ತಬ್ಬಿಬ್ಬು ಬಿಟ್ಟಿತ್ತು, ಕತ್ತಲೆ ಹರಿಯಿತ್ತು, ತಲ್ಲಣವಡಗಿತ್ತು. ಎಲ್ಲರೂ ನಿರಾಳರಾದರು,ಅವರು ನಿಮ್ಮವರು ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.