Index   ವಚನ - 554    Search  
 
ದೇಹವೇ ದೇಗುಲ, ಕಾಲೇ ಕಂಬ, ಶಿರಸ್ಸೇ ಶಿಖರ ನೋಡಾ. ಹೃದಯಕಮಲಕರ್ಣಿಕಾವಾಸವೇ ಸಿಂಹಾಸನ. ಮಹಾಘನಪರತತ್ವವೆಂಬ ಪ್ರಾಣಲಿಂಗವ ಮೂರ್ತಿಗೊಳಿಸಿ, ಪರಮಾನಂದಾಮೃತಜಲದಿಂದ ಮಜ್ಜನಕ್ಕೆರೆದು, ಮಹಾದಳಪದ್ಮದ ಪುಷ್ಪದಿಂದ ಪೂಜಿಸಿ, ಪರಮ ಪರಿಣಾಮವೆಂಬ ನೈವೇದ್ಯವ ಗಡಣಿಸಿ, ಪ್ರಾಣಲಿಂಗಕ್ಕೆ ಪ್ರಾಣಸಂಬಂಧವಾದ ಪೂಜೆಯ ಮಾಡುತ್ತಿರ್ದೆನು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.