Index   ವಚನ - 603    Search  
 
ಮುಪ್ಪುರದರಸಿಂಗೆ ಮುಖವೈದು, ಬಾಯಿ ಹದಿನಾರು, ಹಲ್ಲು ಇನ್ನೂರಹದಿನಾರು ನೋಡಾ. ಆರೂಢನಂಗದಲ್ಲಿ ಅರ್ಭುತದ ಕಿಚ್ಚು ಹುಟ್ಟಲು ಮೂರೂರು ಬೆಂದು, ಮುಖವೈದು ಕೆಟ್ಟು, ಬಾಯಿ ಹದಿನಾರು ಮುಚ್ಚಿ, ಇನ್ನೂರಹದಿನಾರು ಹಲ್ಲು ಮುರಿದವು ನೋಡಾ. ಮುಪ್ಪರದರಸ ನುಂಗಿದ್ದ ಕಿಚ್ಚು ನಿಷ್ಪತ್ತಿಯಾಗಲು ಲಿಂಗಾಂಗ ಸಂಯೋಗವಾಯಿತ್ತು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.