Index   ವಚನ - 613    Search  
 
ಸದ್ಯೋಜಾತನ ಮುಟ್ಟಿ, ಪೃಥ್ವಿ ಬಯಲಾಗಿ ಚಿತ್ತ ಪಂಚಕವು ಕೆಟ್ಟವು ನೋಡಾ. ವಾಮದೇವನಿಗೊಲಿದು, ಅಪ್ಪು ಬಯಲಾಗಿ ಬುದ್ಧಿ ಪಂಚಕವು ಕೆಟ್ಟವು ನೋಡಾ. ಅಘೋರನ ನೆರೆದು, ಅಗ್ನಿ ಬಯಲಾಗಿ ಅಹಂಕಾರ ಪಂಚಕವಳಿದು ನಿರಹಂಕಾರಿಯಾದೆನಯ್ಯ. ತತ್ಪುರುಷನನಪ್ಪಿ, ವಾಯು ಬಯಲಾಗಿ ಮನಪಂಚಕವಳಿದವು ನೋಡಾ. ಈಶಾನ್ಯನೊಡಗೂಡಿ, ಆಕಾಶಬಯಲಾಗಿ ಅರುಹು ಪಂಚಕವು ನಿರ್ಮೂಲವಾದವು ನೋಡಾ. ಮಹಾದೇವನ ನೆರೆದು, ಆತ್ಮ ಬಯಲಾಗಿ ಭಾವ ಪಂಚಕವಳಿದು ನಿರ್ಭಾವಿಯಾಗಿ ನಿಜಲಿಂಗೈಕ್ಯನಾದೆನಯ್ಯ. ಎಲ್ಲಾ ಪದಂಗಳ ಮೀರಿ ಮಹಾಲಿಂಗ ಪದದೊಳಗೆ ಸಂಯೋಗವಾಗಿರ್ದೆನು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.