Index   ವಚನ - 635    Search  
 
ಮಾಡಿದ ಮಾಟವನರಿಯದ ಭಕ್ತ. ಕೂಡಿದ ಕೂಟವನರಿಯದ ಭಕ್ತ. ಮಾಟ ಕೂಟವೆಂಬ ಕೋಟಲೆಯನಳಿದ ನಿಸ್ಸಂಗತ್ವ ನಿರಾಭಾರಿ ನಿಸ್ಸೀಮ ನಿರ್ದೇಹಿ ನಿಜದಲ್ಲಿ ಅಡಗಿದ ನಿತ್ಯ ಮುಕ್ತನಯ್ಯಾ ಭಕ್ತನು, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.