Index   ವಚನ - 693    Search  
 
ಅಂಗವಿಲ್ಲದ ಮಂಗಳಾಂಗಿಯ ಮನದಲ್ಲಿ, ಶಿವಲಿಂಗದುದಯವ ಕಂಗಳಿಲ್ಲದೆ ಕಂಡು, ಅಂಗವಿಲ್ಲದೆ ಸಂಗವ ಮಾಡಿ, ನಿಸ್ಸಂಗಿಯಾಗಿ ಸರ್ವಸಂಗಕ್ಕೆ ಹೊರಗಾಗಿ, ನಿರ್ವಯಲ ಬೆರಸಲು ಮಂಗಳ ಮಂಗಳವೆನುತ್ತಿಪ್ಪ ಮಹಾಗಣಂಗಳ ಸಂಗದಲ್ಲಿ ಮೈಮರೆದನು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.