Index   ವಚನ - 7    Search  
 
ಅಪ್ಪುವಿನ ಉತ್ಕಟದ ಮಣಿಯಂತೆ ಚಿತ್ರದ ಎಸುಗೆಯ ಲಕ್ಷಣದಂತೆ ಸೂತ್ರದ ಲೆಪ್ಪದ ಭಿತ್ತಿ ಕಡೆಗಾಣಿಸಿದಂತೆ ದೀಪದ ಮೊತ್ತ ಕೆಟ್ಟು ಮೃತ್ತಿಕೆಯ ಘಟ ಒಪ್ಪವಿದ್ದಂತೆ ರಾಜ ಚಿತ್ರದಗೃಹ ಹೊತ್ತಿ ಬೆಂದು ಭಸ್ಮಗುಪ್ಪೆಯಿದ್ದಂತೆ ಇದು ಕ್ರಿಯಾಪಥ ಮುಕ್ತನ ಭೇದ. ಅರಿದು ಮರೆದವನ ಚಿತ್ತದ ಗೊತ್ತು. ಷಟ್ಕರ್ಮ ವಿರಕ್ತನ ನಷ್ಟ, ಸರ್ವಗುಣಿ ಸಂಪನ್ನನ ಮುಟ್ಟಿನ ಭೇದ; ನಿರುತ ಸ್ವಯ ಸಂಗದ ಕೂಟ, ಈ ಗುಣ ಸಾವಧಾನಿಯ ಬೇಟ, ಸರ್ವಾಂಗಲಿಂಗಿಯ ಕೂಟ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.