Index   ವಚನ - 8    Search  
 
ಅರಿಕೆ ಉಳ್ಳನ್ನಕ್ಕ ಅರಿವು, ಅರಿವು ಉಳ್ಳನ್ನಕ್ಕ ಕುರುಹು, ಕುರುಹು ಉಳ್ಳನಕ್ಕ ಸತ್ಕ್ರೀ ಮಾರ್ಗಂಗಳು. ಆ ದೆಸೆಯಿಂದ ತ್ರಿವಿಧಸ್ಥಲ ರೂಪಾದವು. ಇಂತೀ ತ್ರಿವಿಧ ತ್ರಿವಿಧದಿಂದ ಷಡುಸ್ಥಲ ರೂಪಾಗಿ ಮೂಲ ಮೊಳೆಯೊಂದರಲ್ಲಿ ಹಲವು ಶಾಖೆ ಹೊಲಬಾದಂತೆ, ಇದು ನಿಜವಸ್ತುವಿನ ವಸ್ತುಕ. ಈ ಗುಣ ನಿರ್ಭಾವ ಭಾವವಾದ ಸಂಬಂಧ. ಇದು ವರ್ತಕ ಭಕ್ತಿಯ ಭಿತ್ತಿ. ಉತ್ತರ ಪೂರ್ವದಲ್ಲಿ ಬೆರಸಿ ನಿರುತ್ತರವಾದ ಸಂಬಂಧ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.