Index   ವಚನ - 18    Search  
 
ಎಂಟು ಯೋಗ ಆರು ಭೇದ ಮೂರು ಬಟ್ಟೆ ಐದು ಮುಟ್ಟು ಈರೈದು ಹಾದಿ ಹದಿನಾರು ಸಂಗ ನಾಲ್ಕು ಮೆಟ್ಟು ಎರಡು ಸಂಚಾರ ಒಂದರ ಕಟ್ಟಿನಲ್ಲಿ ಮುಟ್ಟುಮಾಡಿ ನಿಲಿಸಿ, ದೃಷ್ಟದ ಇಷ್ಟದಲ್ಲಿ ಬೈಚಿಟ್ಟು, ಅವರವರ ಸ್ವಸ್ಥಾನದ ಕಟ್ಟಣೆಯಲ್ಲಿ ವಿಶ್ರಮಿಸಿ ಆ ಚಿತ್ತವ ಆ ಚಿತ್ತು ಒಡಗೂಡಿ ಇಪ್ಪುದೆ ಕ್ರಿಯಾಪಥ ಲಿಂಗಾಂಗಯೋಗ. ಇದನರಿಯದೆ ಮಾಡುವ ಯೋಗವೆಲ್ಲವು ತನ್ನಯ ಭವರೋಗ, ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.