Index   ವಚನ - 49    Search  
 
ದೃಕ್ಕು ಸಕಲವನವಗವಿಸುವನ್ನಕ್ಕ, ಶ್ರೋತ್ರ ಶಬ್ದವ ವೇಧಿಸುವನ್ನಕ್ಕ, ಕ್ರೀ ಶೂನ್ಯವೆನಲೇತಕ್ಕೆ? ಭಾವಿಸಿಹೆನೆಂಬನ್ನಕ್ಕ ಕ್ರೀ ಅರಿದೆಹೆನೆಂಬನ್ನಕ್ಕ ಸೂತಕ. ಕುಕ್ಕುಳಗುದಿವುದ ಹುಟ್ಟಿನಲ್ಲಿ ತೆಗೆದಿಕ್ಕುವಂತೆ, ಅದು ದೃಷ್ಟಕ್ಕ ದೃಷ್ಟ, ನಿಶ್ಚಯಕ್ಕೆ ನಿಜ. ಈ ಗುಣ ಉಭಯಸ್ಥಲ ನಿರ್ವಾಹ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.