Index   ವಚನ - 59    Search  
 
ಪ್ರಥಮ ಮೂರು, ಆಶ್ರಯ ನಾಲ್ಕು, ಸ್ಥಲವಾರು, ಯೋಗವೆಂಟು, ಸಂಯೋಗವೆರಡು, ವಿಯೋಗವೊಂದು, ವಿಭೇದವೆರಡು, ಭೇದವೊಂದು, ಅರಿಕೆಯೆರಡು ಅರಿದುದೊಂದು ಆಕಾಶ ಮೂರು ಅವಾಕಾಶವೆರಡು, ಮಹದಾಕಾಶ ನಾಲ್ಕು. ಇಂತಿವೆಲ್ಲವೂ ಮಹಾಪ್ರಕಾಶದ ಪ್ರಭೆ ಪ್ರಜ್ವಲವಾಗಿ ಉಭಯನಾಮರೂಪ ತಾಳ್ದು, ವಂಶ ಮೂರರಲ್ಲಿ ಅಳವಟ್ಟು ಸ್ಥಲವಾರರಲ್ಲಿ ಬೆಳೆದು, ಕುಳವೆಂಟರಲ್ಲಿ ಪಲ್ಲೈಸಿ ಕುಳ ನಾಲ್ಕರಲ್ಲಿ ಒಕ್ಕಿ, ಫಲ ಮೂರರಲ್ಲಿ ಅಳೆದು ಹಗ ಒಂದರಲ್ಲಿ ತುಂಬಿತ್ತು. ಇಂತೀ ವಿವಿಧ ಸ್ಥಲಂಗಳ ಹೊಲಬನರಿತು ವರ್ತಕಕ್ಕೆ ಕ್ರೀ ಶುದ್ಧ, ಅರಿವಿಂಗೆ ಬಿಡುಗಡೆ ಶುದ್ಧ ಬಿಡುಗಡೆ ಎರಡು ಏಕವಾದಲ್ಲಿ ಸ್ಥಲ ನಿರ್ವಾಹ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ. ಮಾತುಳಂಗ ಮಧುಕೇಶ್ವರನು.