Index   ವಚನ - 69    Search  
 
ಮರ್ಕಟನ ಉಚಿತ, ವಿಹಂಗನ ಪವನ, ಪಿಪೀಲಿಕನ ಧ್ಯಾನ, ತ್ರಿವಿಧಾತ್ಮನ ಭೇದ, ಸ್ಥೂಲದ ವಿವರ, ಸೂಕ್ಷ್ಮದ ಸುಳುಹ, ಕಾರಣದ ಚೋದ್ಯ. ಇಂತೀ ತ್ರಿವಿಧ ವಿವರಂಗಳಲ್ಲಿ ತತ್ವಮಸಿ ಎಂಬ ಭಿತ್ತಿಯ ವಿಚಾರಿಸಿ ಶ್ರುತದಲ್ಲಿ ಕೇಳದುದ ದೃಷ್ಟದಲ್ಲಿ ಕಂಡುದ ಅನುಮಾನದಲ್ಲಿ ಅರಿದುದ ಭಿನ್ನವಿಲ್ಲದೆ ಚಿನ್ಮಯಮೂರ್ತಿ ತಾನಾಗಿ ಕರ್ಮಕ್ರೀಯಲ್ಲಿಯೆ ಲೋಪ. ಶಂಭುವಿನಿಂದಿತ್ತ ಸ್ರಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.