Index   ವಚನ - 99    Search  
 
ಹರಿದ ನೀರಿನ ಅಡಿಯ ಕಾಣಬಹುದಲ್ಲದೆ ನಿಂದ ಇಂಗಡಲಿನ ಅಡಿಯ ಕಂಡವರುಂಟೆ? ಚಲನೆಯಿಂದ ತೋರುವ ತೋರಿಕೆಯ ಕಾಣಬಹುದಲ್ಲದೆ ಶಬ್ದ ಮುಗ್ಧವಾದ ಶರಣನ ಚಿತ್ತವ ಭೇದಿಸಬಹುದೆ? ಅದು ಸರಿಹರಿದ ಸಂಬಂಧ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.