ಮುತ್ತೈದೆ ಸತ್ಯಕ್ಕಗಳಿರಾ!
ನಿತ್ಯರೆನ್ನ ಮನೆಗೆ ಕರ್ತುವಾಗಿ ಬಂದರೆ ಅರ್ಥವನೀವೆ.
ಅವರಿರತಕ್ಕ ಇಚ್ಫೆ ಬಾರದಮುನ್ನ ಎಚ್ಚರವನೀವುತ ಬನ್ನಿರೆ.
ಪಂಚವರ್ಣದಾಭರಣವ ನಿಮ್ಮ ಕೈಯಿಂದೆ ಕೊಡಿಸುವೆ,
ನಾನಚ್ಚತಗೊಂಬೆ ಎನ್ನ ಬಯಕೆಯನೊಯ್ದೊಪ್ಪಿಸಿ
ಅವರ ಸಮರಸಾನಂದವೆನಗಿತ್ತಡೆ
ನಿಮ್ಮ ಕೈಯಲ್ಲಿ ನಿರಂತರ ಗುರುನಿರಂಜನ ಚನ್ನಬಸವಲಿಂಗ.