Index   ವಚನ - 513    Search  
 
ಪ್ರಾಣಲಿಂಗಸಂಬಂಧಿಯಾದ ಮಹಾತ್ಮನು ಅರಿಷಡ್ವರ್ಗಂಗಳರಿಯ, ಕ್ಷುತ್ತು ಪಿಪಾಸು ಶೋಕ ಮೋಹ ಜರೆ ಮರಣ ಗುಣತ್ರಯದೊಳೊಂದಿ ನಿಲ್ಲ. ತನುತ್ರಯ ಮಲತ್ರಯ ಈಷಣತ್ರಯ ಜೀವತ್ರಯ ಅವಸ್ಥಾತ್ರಯವೆಂಬ ಪಂಚದಶ ಮಾಯಾಪಟಲ ಹರಿದು ಮರೆದು ಮಹಾಘನ ಬೆಳಗಿನ ಸುಖವ ಸುಗ್ಗಿಯೊಳಿರ್ದು ಪ್ರಾಣಲಿಂಗವನರ್ಚಿಸುತ್ತಿಹನು ಭಕ್ತಿತ್ರಯಗೂಡಿ ಗುರುನಿರಂಜನ ಚನ್ನಬಸವಲಿಂಗದಲ್ಲಿ.