Index   ವಚನ - 662    Search  
 
ಊರೆಂಬುದರಿಯ ಉಲುವೆಂಬುದರಿಯ ಬರಿಯ ಮಾತಿನ ಬಣ್ಣವನರಿಯದ ಸಿರಿಸಂಪದದೊಳಾನಂದ ತಲೆಗೇರಿ ಜಾತಿ ಗೋತ್ರ ಕುಲಾಶ್ರಮ ವರ್ಣ ನಾಮಂಗಳನುಯೇನೆಂಬ ಭಾವವ ಮರೆದಿರ್ದನು ಗುರುನಿರಂಜನ ಚನ್ನಬಸವಲಿಂಗ ತಾನಾದ ಶರಣ.