Index   ವಚನ - 679    Search  
 
ಘನಗಂಭೀರಲಿಂಗವೆನ್ನ ಕಾಯದನುವರಿಯಬಂದಬಳಿಕ ಎನ್ನ ಕಾಯದ ರತಿಯ ಕಡೆಗಿಡಲೆನಗೆ ಸೊಗಸದು ಕಾಣಮ್ಮ. ಎನ್ನ ಮನದನುವರಿಯಬಂದಬಳಿಕ ಮನದ ಮಮಕಾರ ಸರಿದರಿಯಲೆನಗೆ ಸೊಗಸದು ಕಾಣಮ್ಮ. ಎನ್ನ ಪ್ರಾಣದನುವರಿಯಬಂದಬಳಿಕ ಪ್ರಾಣದ ಮೋಹವಿತರವೆರಸಲೆನಗೆ ಸೊಗಸದು ಕಾಣಮ್ಮ. ಎನ್ನ ಭಾವದನುವರಿಯಬಂದಬಳಿಕ ಭಾವದ ಭ್ರಾಂತಿ ಪರಿದಾವರಿಸಲೆನಗೆ ಸೊಗಸದು ಕಾಣಮ್ಮ. ಎನ್ನ ಕಾಯ ಮನ ಪ್ರಾಣ ಭಾವವೆಂಬ ಚತುರ್ವಿಧಸಾರಾಯ ಸುಖಲೋಲನಾಗಿರ್ದಬಳಿಕ ಗುರುನಿರಂಜನ ಚನ್ನಬಸವಲಿಂಗವನಗಲಲೆಡೆಗಾಣದೆ ಪರವಶವಾಗಿರ್ದೆ ಕಾಣಮ್ಮ.