Index   ವಚನ - 827    Search  
 
ಗತಿಮತಿಯೊಳೊಡವೆರೆದ ಪರಮಾನಂದ ಶರಣ ಪುತ್ರ ಮಿತ್ರ ಕಳತ್ರಾದಿಗಳನರಿಯ ನೋಡಾ. ಜಾತಿ ಗೋತ್ರ ಕುಲ ಆಶ್ರಮ ನಾಮ ವರ್ಣಂಗಳಿಲ್ಲದೆ ಭಕ್ತಾಂಗನೆ ಮುಕ್ತಾಂಗನೆಯ ನೆರೆದು ಯುಕ್ತಿಯನಳಿದುಳಿದು ಗುರುನಿರಂಜನ ಚನ್ನಬಸವಲಿಂಗದಲ್ಲಿ ತಾನು ತಾನಾದ ಭಾವಶೂನ್ಯನ ಏನೆಂದುಪಮಿಸಬಹುದು ಹೇಳಾ!