Index   ವಚನ - 845    Search  
 
ಕಾಮದಲ್ಲಿ ಮುಳುಗಿ ನುಡಿವರು ಶರಣಂಗೆ ಕಾಮಿಯೆಂದು, ಕ್ರೋಧದಲ್ಲಿ ಮುಳುಗಿ ನುಡಿವರು ಶರಣಂಗೆ ಕ್ರೋಧಿಯೆಂದು, ಲೋಭದಲ್ಲಿ ಮುಳುಗಿ ನುಡಿವರು ಶರಣಂಗೆ ಲೋಭಿಯೆಂದು, ಮೋಹದಲ್ಲಿ ಮುಳುಗಿ ನುಡಿವರು ಶರಣಂಗೆ ಮೋಹಿಯೆಂದು, ಮದದಲ್ಲಿ ಮುಳುಗಿ ನುಡಿವರು ಶರಣಂಗೆ ಮದಭರಿತನೆಂದು, ಮತ್ಸರದಲ್ಲಿ ಮುಳುಗಿ ನುಡಿವರು ಶರಣಂಗೆ ಮತ್ಸರಭರಿತನೆಂದು, ಅರಿಷಡ್ವರ್ಗದಲ್ಲಿರ್ದು ಒಂದೊಂದು ನುಡಿದರೆ ಸಂದೇಹವಿಲ್ಲ ಶರಣಂಗೆ. ನಿಂದೆಯನಾಡುವ ನರನಿಗೆ ಸೂಕರಜನ್ಮವು ಇದು ಸತ್ಯ ಗುರುನಿರಂಜನ ಚನ್ನಬಸವಲಿಂಗದ ವಚನ.