Index   ವಚನ - 982    Search  
 
ನಿಜವಕೊಟ್ಟು ಗಜಬಜೆಯನೆಸಗಲುಂಟೆ? ಒಡಲಕಿಚ್ಚಿನ ತುಡುಗು ಬೆಡಗಿನೊಳಗಿಲ್ಲ ಉಪದೇಶ. ನಿನ್ನ ಸಂಸಾರ ನಿನ್ನುದ್ದ, ನಿಃಸಂಸಾರಿಗಳ ತಗುಲಿಕೊಳ್ಳದಿರು. ಕೊಟ್ಟವರಾರು ಕೊಂಡವರಾರು? ಹಮ್ಮು ಬಿಮ್ಮು ಹವಣಿಸಿಕೊ ಗುರುನಿರಂಜನ ಚನ್ನಬಸವಲಿಂಗಸಹಿತ ಗುರುವೆನಿಸುವರೆ.