Index   ವಚನ - 1034    Search  
 
ಮುನ್ನೂರು ಮುನ್ನೂರು ಮುನ್ನೂರು ವಾಸನೆಯನಳಿದುಳಿದ ವಾಸನೆಯ ಲತೆಗಳೊಳ್ಬೆಳೆದ ಅತಿಶಯಾನಂದರೂಪವನರಿಯಲಾರಳವಲ್ಲ ನೋಡಾ. ಭೂಚರರರಿಯರು ಖೇಚರರರಿಯರು ಪೆರ್ಚಲದಾಶ್ರಯವಗೊಂಡಾಯಸವನುಂಬ ಅರೆಮರುಳರಂತಿರಲಿ ಧರೆಯೊಳಿಪ್ಪ ನರರೆತ್ತ ಬಲ್ಲರು ಹೇಳಾ! ನಿಮ್ಮ ಶರಣರ ಘನವ ಗುರುನಿರಂಜನ ಚನ್ನಬಸವಲಿಂಗಾ.