Index   ವಚನ - 1076    Search  
 
ಅಂತರಂಗದನುವ ಬಹಿರಂಗಕ್ಕೆ ಬೆರಸಿತಂದು ಹಿಡಿ ಹಿಡಿದು ನಡೆವುದೊಂದು ಕಡುಜಾಣದಾಗು, ಈ ಕುರುಹಿನೊಳು ನಿಂದು ಹೊರಗಣನೆರವಿಯ ಗುದ್ದಾಟಕ್ಕೆ ಸೆರೆಸೂರೆಹೋಯಿತ್ತು ಒಳಗಣ ಒಡವೆ ಊರು ಹಾಳಾದಲ್ಲಿ ಕ್ಷೇತ್ರದ ಸುಖವಾರಿಗೆ? ಗುರುನಿರಂಜನ ಚನ್ನಬಸವಲಿಂಗ ಒಳಹೊರಗೆ ತನ್ನ ತಾ ನೋಡುತಾಡುತಿರ್ಪನು.