Index   ವಚನ - 1    Search  
 
ಅಂಗದಿಂದುದಯವಾದಾತ ಮಡಿವಾಳಯ್ಯ. ಲಿಂಗದಿಂದುದಯವಾದಾತ ರೇವಣಸಿದ್ಧಯ್ಯ. ಭಸ್ಮದಿಂದುದಯವಾದಾತ ಸಿದ್ಧರಾಮಯ್ಯ. ಪಾದೋದಕದಿಂದ ಉದಯವಾದವಳು ಅಕ್ಕಮಹಾದೇವಿ. ಮಂತ್ರದಿಂದುದಯವಾದಾತ ನಿಮ್ಮ ಸೋದರಮಾವ ಬಸವಯ್ಯ. ಪ್ರಸಾದದಿಂದುದಯವಾದಾತ ನೀನಲ್ಲವೆ ಚೆನ್ನಬಸವಯ್ಯ ಬಸವಣ್ಣಪ್ರಿಯ ಚೆನ್ನಸಂಗಯ್ಯ.