Index   ವಚನ - 5    Search  
 
ಎನ್ನ ಕುಲ ಸೂತಕವ ಕಳೆದಾತ ಬಸವಣ್ಣ. ಎನ್ನ ಛಲ ಸೂತಕವ ಕಳೆದಾತ ಬಸವಣ್ಣ. ಎನ್ನ ತನು ಸೂತಕವ ಕಳೆದಾತ ಬಸವಣ್ಣ. ಎನ್ನ ಮನ ಸೂತಕವ ಕಳೆದಾತ ಬಸವಣ್ಣ. ಎನ್ನ ನೆನಹು ಸೂತಕವ ಕಳೆದಾತ ಬಸವಣ್ಣ. ಎನ್ನ ಭಾವ ಸೂತಕವ ಕಳೆದಾತ ಬಸವಣ್ಣ. ಎನ್ನ ಅರುಹುಮರಹಿನ ಸಂದುಸಂಶಯವ ಬಿಡಿಸಿದಾತ ಬಸವಣ್ಣ. ಎನ್ನ ತನ್ನೊಳಗೆ ಇಂಬಿಟ್ಟುಕೊಂಡಾತ ಬಸವಣ್ಣ. ತನ್ನ ಎನ್ನೊಳಗೆ ಇಂಬಿಟ್ಟುಕೊಂಡಾತ ಬಸವಣ್ಣ. ನಿಜದ ನಿರ್ವಯಲ ಬಾಗಿಲ ನಿಜವ ತೋರಿದಾತ ಬಸವಣ್ಣ. ಬಸವಣ್ಣಪ್ರಿಯ ಚೆನ್ನಸಂಗಯ್ಯನ ಹೃದಯಕಮಲದಲ್ಲಿ ನಿಜನಿವಾಸಿಯಾಗಿರಿಸಿದ ಎನ್ನ ತಂದೆ ಸಂಗನಬಸವಣ್ಣನು.