Index   ವಚನ - 7    Search  
 
ಎನ್ನ ಭವದ ಬಳ್ಳಿಯ ಬೇರು ಹರಿಯಿತ್ತಯ್ಯಾ; ಸಂಗನಬಸವಣ್ಣನ ಒಕ್ಕುದ ಕೊಂಡೆನಾಗಿ. ಎನ್ನ ಮನದ ಕಪಟ ಹಿಂಗಿತ್ತಯ್ಯಾ; ಚೆನ್ನಬಸವಣ್ಣನ ಕರುಣವ ಪಡೆದೆನಾಗಿ. ಎನ್ನಂತರಂಗದ ಸಂದು ಸಂಶಯ ತೊಲಗಿತ್ತಿಂದು ಬಸವಣ್ಣಪ್ರಿಯ ಚೆನ್ನಸಂಗಯ್ಯನಲ್ಲಿ ಎನ್ನ ಪರಮಗುರು ಅಲ್ಲಮಪ್ರಭುದೇವರ ಶ್ರೀ ಚರಣವ ಕಂಡೆನಾಗಿ.