Index   ವಚನ - 13    Search  
 
ಮನದೊಡೆಯ ಮಹಾದೇವ ಮನವ ನೋಡಿಹೆನೆಂದು ಮನುಜರ ಕೈಯಿಂದ ಒಂದೊಂದ ನುಡಿಸುವನು. ಇದಕ್ಕೆ ಕಳವಳಿಸದಿರು ಮನವೆ, ಕಾತರಿಸದಿರು ತನುವೆ, ನಿಜವ ಮರೆಯದಿರು ಕಂಡಾ, ನಿಶ್ಚಿಂತನಾಗಿರು ಮನವೆ. ಬಸವಣ್ಣಪ್ರಿಯ ಚೆನ್ನಸಂಗಯ್ಯನು ಬೆಟ್ಟದ ನಿತಪರಾಧವನು ಒಂದು ಬೊಟ್ಟಿನಲ್ಲಿ ತೊಡೆವನು.