Index   ವಚನ - 2    Search  
 
ಅಂಗದೊಳಗಿಪ್ಪುದು ಲಿಂಗವಲ್ಲ, ಅಂಗದ ಹೊರಗಿಪ್ಪುದು ಲಿಂಗವಲ್ಲ. ಎಲ್ಲ ಅಂಗಂಗಳನೊಳಕೊಂಡಿಪ್ಪ ಲಿಂಗ, ಹೋಗುತ್ತ ಬರುತ್ತ ಇಪ್ಪುದಲ್ಲ! ಚಲನೆಯಿಲ್ಲದ ಅಚಲವಪ್ಪ ಲಿಂಗಕ್ಕೆ, ಹೋಯಿತ್ತು ಎಂಬ ಸಂದೇಹವಿಲ್ಲವೆಂದನಂಬಿಗರ ಚೌಡಯ್ಯ.