Index   ವಚನ - 14    Search  
 
ಅಡವಿಯೊಳಗರಸುವಡೆ ಸಿಡಿಗಂಟಿ ತಾನಲ್ಲ. ಮಡುವಿನೊಳಗರಸುವಡೆ ಮತ್ಸ್ಯಮಂಡೂಕನಲ್ಲ. ತಪಂಬಡುವಡೆ ವೇಷಕ್ಕೆ ವೇಳೆಯಲ್ಲ. ಒಡಲ ದಂಡಿಸುವಡೆ ಕೊಡುವ ಸಾಲಿಗನಲ್ಲ. ಅಷ್ಟತನುವಿನೊಳಗೆ ಹುದುಗಿದ್ದ ಲಿಂಗವ ನಿಲುಕಿ ನೋಡಿಯೆ ಕಂಡನಂಬಿಗರ ಚೌಡಯ್ಯ.