Index   ವಚನ - 23    Search  
 
ಅಯ್ಯ! ಪಾಷಾಣಕ್ಕೆ ಗಿರಿ ಸವೆದವು.ಪತ್ರೆಗೆ ತರು ಸವೆದವು. ಸಪ್ತಸಾಗರಂಗಳು ಮಜ್ಜನಕ್ಕೆ ಸವೆದವು. ಅಗ್ನಿ ಧೂಪಕ್ಕೆ ಸವೆಯಿತ್ತು. ವಾಯು ಕಂಪಿತಕ್ಕೆ ಸವೆಯಿತ್ತು ಉಘೆ! ಚಾಂಗು ಭಲಾ! ಎಂಬ ಶಬ್ದ ಸವೆಯಿತ್ತು. ಎನ್ನಗಿನ್ನೆಂತೊ, ಉಮೇಶನ ಶರಣರು ಮಹಮನೆಯಲ್ಲಿ ಶಿವಲಿಂಗಾರ್ಚನೆಗೆ ಕುಳ್ಳಿದ್ದಡೆ, ನಾನವರ ಪಾದರಕ್ಷೆಯ ಕಾಯ್ದಕೊಂಡಿದ್ದೇನೆಂದನಂಬಿಗರ ಚೌಡಯ್ಯ.