Index   ವಚನ - 27    Search  
 
ಅರಿಯದ ಗುರು ಅರಿಯದ ಶಿಷ್ಯಂಗೆ ಅನುಗ್ರಹವ ಮಾಡಿದಡೇನಪ್ಪುದೆಲವೋ. ಅಂಧಕನ ಕೈಯನಂಧಕ ಹಿಡಿದಡೆ ಮುಂದನಾರು ಕಾಬರು ಹೇಳಲೆ ಮರುಳೆ. ತೊರೆಯಲದ್ದವನನೀಸಲರಿಯದವ ತೆಗೆವ ತೆರನಂತೆಂದನಂಬಿಗರ ಚೌಡಯ್ಯ.