Index   ವಚನ - 60    Search  
 
ಎರಡು ಗ್ರಾಮದ ನಡುವೆ ಕಡದ ಸೀಮೆಯ ಕಲ್ಲು. ಅದ ಕಟ್ಟಿದಾತ ಗುರುವಲ್ಲ, ಕಟ್ಟಿಸಿಕೊಂಡಾತ ಶಿಷ್ಯನಲ್ಲ. ಆದಿಯನರಿಯದ ಗುರುವು, ಭೇದಿಸಲರಿಯದ ಶಿಷ್ಯ, ಇವರಿಬ್ಬರೂ ಉಭಯಭ್ರಷ್ಟರೆಂದಾತನಂಬಿಗರ ಚೌಡಯ್ಯ.