Index   ವಚನ - 89    Search  
 
ಕಲ್ಲಿನಲ್ಲಿ ಕಠಿಣ, ಖುಲ್ಲರಲ್ಲಿ ದುರ್ಗುಣ, ಬಲ್ಲವರಲ್ಲಿ ಸುಗುಣ ಉಂಟೆಂದೆಲ್ಲರೂ ಬಲ್ಲರು. ಇಂತೀ ಇವು ಎಲ್ಲರ ಗುಣ. ಅಲ್ಲಿಗಲ್ಲಿಗೆ ಸರಿಯೆಂದು ಗೆಲ್ಲ ಸೋಲಕ್ಕೆ ಹೋರದೆ ನಿಜವೆಲ್ಲಿತ್ತು ಅಲ್ಲಿಯೆ ಸುಖವೆಂದನಂಬಿಗರ ಚೌಡಯ್ಯ.