Index   ವಚನ - 115    Search  
 
ಕ್ರೀಯನರಿದವಂಗೆ ಗುರುವಿಲ್ಲ, ಆಚಾರವನರಿದವಂಗೆ ಲಿಂಗವಿಲ್ಲ, ಉತ್ಪತ್ತಿ ಸ್ಥಿತಿ ಲಯವನರಿದವಂಗೆ ಜಂಗಮವಿಲ್ಲ, ಪರಬ್ರಹ್ಮವನರಿದವಂಗೆ ಸರ್ವೇಂದ್ರಿಯವಿಲ್ಲ, ತನ್ನನರಿದವಂಗೆ ಹಿಂದೆ ಮುಂದೆ ಎಂಬುದೊಂದೂಯಿಲ್ಲ, ಎಂದನಂಬಿಗರ ಚೌಡಯ್ಯ.