Index   ವಚನ - 117    Search  
 
ಗಂಡನೆಂಜಲಿಗೆ ಹೇಸುವಳು ಮಿಂಡನ ತಂಬುಲವ ತಿಂಬುವ ತೆರನಂತೆ, ಗುರುವಿನುಪದೇಶವ ಕೊಂಡು, ಅನೀತಿ ದೇವರುಗಳ ಎಡೆಯ ತಿನ್ನುವಂತಹ ಮಾದಿಗರು ನೀವು ಕೇಳಿರೊ. ಅಂಡಜ ಉತ್ಪತ್ತಿ ಎಲ್ಲ ದೇವರಿಂದಾಯಿತ್ತು. ಮೈಲಾರ, ಬೀರ, ಭೈರವ, ಧೂಳ, ಕೇತನೆಂಬಕಿರಿ ದೈವಕ್ಕೆರಗಿ, ಭಕ್ತರೆನಿಸಿಕೊಂಬುವ ಚಂಡಿನಾಯಿಗಳ ಕಂಡು ಮನ ಹೇಸಿತ್ತೆಂದಾತ ನಮ್ಮ ಅಂಬಿಗರ ಚೌಡಯ್ಯ ನಿಜಶರಣನು.