Index   ವಚನ - 124    Search  
 
ಗುರುವಿನೊಳಡಗಿದ ಭಕ್ತ ಪರವ ಕಂಡುದಿಲ್ಲ, ಲಿಂಗದೊಳಡಗಿದ ಭಕ್ತ ಜಂಗಮವ ಕಂಡುದಿಲ್ಲ. ಇವರಿಬ್ಬರ ಭಕ್ತಿಯೂ ಹುರಿಗೂಡದ ಹಗ್ಗದಂತಾಯಿತ್ತು ನೋಡಯ್ಯ. ಅರಿವು ಆಚಾರವಿಡಿದು ಆಚರಿಸಿದ ಸದ್ಭಕ್ತನು. ಗುರು ಲಿಂಗ ಜಂಗಮವ ನೆರೆ ಕಂಡು ಸನ್ಮತನಾಗಿ ಇ[ಹ] ಪರವೆಂಬುಭಯ ಸಂಕಲ್ಪವರತದಲ್ಲದಿಲ್ಲವೆಂದಾತ ನಮ್ಮ ಅಂಬಿಗರ ಚೌಡಯ್ಯ.