Index   ವಚನ - 127    Search  
 
ಘಟದ ಮಧ್ಯದಲ್ಲಿ ನಿಂದವನ, ಆತ್ಮನ ಚಿತ್ತದಲ್ಲಿ ಅರಿದವನ, ಅಲ್ಲ ಆಹುದೆಂದು ಗೆಲ್ಲ ಸೋಲಕ್ಕೆ ಹೋರದವನ, ಎಲ್ಲಾ ಜೀವಂಗಳಲ್ಲಿ ದಯವುಳ್ಳವನ, ಆತನೆಲ್ಲಿಯೂ ಸುಖಿಯೆಂದನಂಬಿಗರ ಚೌಡಯ್ಯ.