Index   ವಚನ - 130    Search  
 
ಜಂಗಮವ ಕರತಂದು ಮನೆಯಲ್ಲಿ ಕುಳ್ಳಿರಿಸಿ, ಅಂಗದ ಮೇಲಣ ಜಪವನೆಣಿಸುವ ಭಕ್ತನ ಜಪದ ಬಾಯಲ್ಲಿ ಕೆರಹನಿಕ್ಕಲಿ! ಅವನ ಲಿಂಗಾರ್ಚನೆಯ ಬಾಯಲ್ಲಿ ಹುಡಿಯ ಹೊಯ್ಯಲಿ! ಜಂಗಮದ ತೃಪ್ತಿಯನರಿಯದೆ ಲಿಂಗವಂತನೆಂತಾದನೊ? ಮರುಳೆ! ಅವ ಪಿಸುಣ, ಹೊಲೆಯನೆಂದಾತನಂಬಿಗರ ಚೌಡಯ್ಯ.