Index   ವಚನ - 139    Search  
 
ತಟಾಕ ಒಡೆದಡೆ ಕಟ್ಟುವಡೆವುದಲ್ಲದೆ. ಅಂಬುಧಿ ತುಂಬಿ ಮೇರೆದಪ್ಪಿದಲ್ಲಿ ಕಟ್ಟಿಂಗೆ ಹಿಂಗಿ ನಿಂದುದುಂಟೆ? ಅರಿಯದವಂಗೆ ಅರಿಕೆಯ ಹೇಳಿದಡೆ ಅರಿವನಲ್ಲದೆ, ಅರಿದು ಮರೆದವಂಗೆ ಬೇರೊಂದೆಡೆಯ ಹೇಳಿಹೆನೆಂದಡೆ, ಕಡೆ ನಡು ಮೊದಲಿಲ್ಲ ಎಂದನಂಬಿಗರ ಚೌಡಯ್ಯ.