Index   ವಚನ - 141    Search  
 
ತಡಿ ನೆಲೆ ಇಲ್ಲದ ಮಹಾನದಿಯಲ್ಲಿ ಒಡಲಿಲ್ಲದಂಬಿಗ ಬಂದೈದಾನೆ. ಹಿಡಿವ ಬಿಡುವ ಮನದ ಬೆಲೆಗೊಟ್ಟಡೆ ಗಡಣವಿಲ್ಲದೆ ಹಾಯಿಸುವೆ ಹೊಳೆಯ, ನುಡಿಯಿಲ್ಲದ ನಿಸ್ಸೀಮ ಗ್ರಾಮದಲಿರಿಸು[ವ]ನೆಂದಾತನಂಬಿಗರ ಚೌಡಯ್ಯ