ದೊಡ್ಡ ದೊಡ್ಡ ಶೆಟ್ಟಿಗಳ ಕಂಡುಅಡ್ಡಗಟ್ಟಿ ಹೋಗಿ,
ಶರಣಾರ್ಥಿ ಎಂಬರು.
ಎಡ್ಡುಗಳ್ಳತನಕ್ಕೆ ತಮ್ಮ ಮಠಕ್ಕೆ ಬನ್ನಿ ಹಿರಿಯರೇ ಎಂಬರು.
ಹೋಗಿ ಶರಣಾರ್ಥಿ ಭಕ್ತನೆಂದೊಡೆ ಕೇಳದ ಹಾಗೆ
ಅಡ್ಡ ಮೋರೆಯನಿಕ್ಕಿಕೊಂಡು ಸುಮ್ಮನೆ ಹೋಗುವ
ಹೆಡ್ಡ ಮೂಳರಿಗೆ ದುಡ್ಡೇ ಪ್ರಾಣವಾಯಿತ್ತು.
ದುಡ್ಡಿಸ್ತರ ಕುರುಹನರಿಯದೆ ಮೊಳಪಾದದ ಮೇಲೆ
ಹೊಡಹೊಡಕೊಂಡುನಗುತಿರ್ದಾತ
ನಮ್ಮ ಅಂಬಿಗರ ಚೌಡಯ್ಯ.