Index   ವಚನ - 158    Search  
 
ನಾದದ ಬಲದಿಂದ ವೇದಂಗಳಾದವಲ್ಲದೆ, ವೇದ ಸ್ವಯಂಭುವಲ್ಲ. ನಿಲ್ಲು ಮಾತಿನ ಬಲದಿಂದ ಶಾಸ್ತ್ರಂಗಳಾದವಲ್ಲದೆ, ಶಾಸ್ತ್ರ ಸ್ವಯಂಭುವಲ್ಲ ನಿಲ್ಲು. ಪಾಷಾಣದ ಬಲದಿಂದ ಸಮಯಂಗಳಾದವಲ್ಲದೆ ಸಮಯ ಸ್ವಯಂಭುವಲ್ಲ ನಿಲ್ಲು. ಇಂತೀ ಮಾತಿನ ಬಣಬೆಯ ಮುಂದಿಟ್ಟುಕೊಂಡು ಆತನ ಕಂಡೆಹೆನೆಂದಡೆ, ಆತನತ್ಯತಿಷ್ಟದ್ದಶಾಂಗುಲ, ಆತನೆಂತು ಸಿಲುಕುವನೆಂದಾತನಂಬಿಗರ ಚೌಡಯ್ಯ.