Index   ವಚನ - 162    Search  
 
ನಾಲ್ಕು ವೇದವನೋದಿದ ನಂತರ ಮನೆಯ ಬೋನವ ಶಿವಭಕ್ತರ ಮನೆಯಲ್ಲಿರುವ ನಾಯಿ ಮೂಸಿ ನೋಡಲಾಗದು. ಸಾಮವೇದಿ ಹೋಗುತ್ತಿರಲು ಶ್ವಪಚಯ್ಯಗಳು ತಮ್ಮ ಪಾದುಕದಿಂದ ಪಾಕವ ಮುಚ್ಚಿದರು. ``ಶ್ವಾನೋ ಶ್ರೇಷ್ಠ ವೆಂದು ಇಕ್ಕಿದೆನು ಮುಂಡಿಗೆಯ. ಎತ್ತಿರೋ ಜಗದ ಸಂತೆಯ ಸೂಳೆಯ ಮಕ್ಕಳು. ಜಗಕ್ಕೆ ಪಿತನೊಬ್ಬನಲ್ಲದೆ ಇಬ್ಬರೆಂದು ಬೊಗಳುವರ ಮೋರೆಯ ಮೇಲೆ ಹೊಡೆ ಎಂದಾತ ನಮ್ಮ ಅಂಬಿಗರ ಚೌಡಯ್ಯ ನಿಜಶರಣನು.