Index   ವಚನ - 163    Search  
 
ನಾಲ್ಕೈದು ಹದಿನೆಂಟು ಪುರಾಣ, ಇಪ್ಪತ್ತೆಂಟು ದೇವತಾಗಮಂಗಳು ಚೌಷಷ್ಟಿ ಅಖಿಳ ವಿದ್ಯಂಗಳ ಸಾಧಿಸಿ ನನಗಾರು ಸರಿ ಎಂಬ ಹೊಲೆಮಾದಿಗರ ಎನಗೊಮ್ಮೆ ತೋರದಿರಯ್ಯಾ. ಅದೇನು ಕಾರಣವೆಂದಡೆ: ಸಕಲಶಾಸ್ತ್ರಂಗಳಿಗೆ ಚೌಷಷ್ಟಿ ಕಳಾವಿದ್ಯಕ್ಕೆ ನಿಲುಕದ ಪರಶಿವನ ಕಾಯ ಜೀವ ಪ್ರಸಾದದಲ್ಲಿ ನೆಲೆಗೊಳಿಸಲರಿಯದೆ ಒಡಲ ಹೊರೆವ ಹೊಲೆ ಮಾದಿಗರಾದಂತಾಯಿತ್ತೆಂದಡೆ ಶುಕನುಡಿದಂತಾಯಿತ್ತೆಂದಾತ ನಮ್ಮ ಅಂಬಿಗರ ಚೌಡಯ್ಯ.