ಬಯಲ ಉದಕವ ಹಿಡಿದು ಮಜ್ಜನಕ್ಕೆರೆವೆನಯ್ಯ.
ಸಕಲವನುಳಿದೊಂದು ಪುಷ್ಪದ ಪೂಜೆಯ ಮಾಡುವೆನಯ್ಯ.
ಸುಗಂಧ ದುರ್ಗಂಧವ ಕಳೆದು ಧೂಪಾರತಿಯ ಮಾಡುವೆನಯ್ಯಾ.
ಪರಬ್ರಹ್ಮವ ಹಿಡಿದು ನಿವಾಳಿಯನೆತ್ತುವೆನಯ್ಯಾ.
ಪುಣ್ಯಪಾಪವ ಕಳೆದು ಓಗರವನಿಕ್ಕುವೆನಯ್ಯಾ.
ಹದಿನಾಲ್ಕು ಭುವನವನೊಳಗುಮಾಡಿ ಹೊರಗೆ ನಿಂದು
ಸದಾಶಿವನ ಪೂಜಿಸಿದಾತನಂಬಿಗರ ಚೌಡಯ್ಯ.