Index   ವಚನ - 195    Search  
 
ಬ್ರಹ್ಮನ ನಾವು ಬಲ್ಲೆವು, ವಿಷ್ಣುವ ನಾವು ಬಲ್ಲೆವು, ತೆತ್ತೀಸಕೋಟಿ ದೇವತೆಗಳ ನಾವು ಬಲ್ಲೆವು. ಅದೇನು ಕಾರಣವೆಂದಡೆ: ಇವರು ಹಲವು ಕಾಲ ನಮ್ಮ ನೆರೆಮನೆಯಲ್ಲಿದ್ದರಾಗಿ. ಇವರು ದೇವರೆಂಬುದ ನಾ ಬಲ್ಲೆನಾಗಿ, ಒಲ್ಲೆನೆಂದಾತನಂಬಿಗರ ಚೌಡಯ್ಯ.