Index   ವಚನ - 200    Search  
 
ಭಟಂಗೆ ಭೀತಿ ಉಳ್ಳನ್ನಕ್ಕ ರಣವ ಹೊಗಬಲ್ಲನೆ? ಬಲ್ಲವ ಅರಿಯದವರಲ್ಲಿ ಗೆಲ್ಲ ಸೋಲಕ್ಕೆ ಹೋರುವನ್ನಬರ ಬಲ್ಲವನಹನೆ? ಅರಿದು ನುಡಿಯಲಿಲ್ಲ, ಮರೆದು ಸುಮ್ಮನಿರಲಿಲ್ಲ. ಆರು ಎಂದಂತೆ ಎನಲಿಲ್ಲ ಎಂದನಂಬಿಗರ ಚೌಡಯ್ಯ.