Index   ವಚನ - 245    Search  
 
ಶಿವಭಕ್ತನಾದ ಬಳಿಕ ಅನ್ಯಭಜನೆಯ ಮಾಡದಿರಬೇಕು. ಶಿವಭಕ್ತನಾದ ಬಳಿಕ ಪರಸತಿ, ಪರನಿಂದೆ, ಪರಧನವ ಹಿಡಿಯದಿರಬೇಕು. ಶಿವಭಕ್ತನಾದ ಬಳಿಕ ಲಿಂಗಕ್ಕೆ ತೋರದೆ ಪ್ರಸಾದವ ಮುಟ್ಟದಿರಬೇಕು. ಅಂಗಲಿಂಗವು ಸಮರಸವಾಗಿರಬೇಕು. ದಾರಿದ್ರ್ಯವು ಬಂದರೆ [ಲಿಂ]ಗವೇ ನಿನ್ನದೆಂದರಿಯಬೇಕು. ಸಂಪತ್ತು ಬಂದರೆ ನಿನ್ನದೆಂದು ಭಾವಿಸಬೇಕು. ಲಿಂಗಬಾಹ್ಯರಿಗೆ ನರಕ ತಪ್ಪದು. 'ಇಷ್ಟಲಿಂಗಮವಿಶ್ವಸ್ಯ ಅನ್ಯಲಿಂಗಮುಪಾಸತೇ ಶ್ವಾನಯೋನಿಶತಂ ಗತ್ವಾ ಚಂಡಾಲಗೃಹಮಾಚರೇತ್' ಇದು ಕಾರಣ, ಪ್ರಾಣಲಿಂಗದ ಭಕ್ತಿಯ ಮರೆದು ಯಮಪಟ್ಟಣಕ್ಕೆ ಹೋಹರೆಂದಾತ ನಮ್ಮ ಅಂಬಿಗರ ಚೌಡಯ್ಯ ನಿಜಶರಣನು.