Index   ವಚನ - 262    Search  
 
ಸೋಮವಾರ, ಹುಣ್ಣಿಮೆ, ಅಮವಾಸ್ಯೆ ಎಂದು ಉಪವಾಸವಿರ್ದು ಶಿವನಿಗೆ ಅರ್ಪಿತ ಎಂದು ನುಡಿವರು. ಕಾಮ ಕ್ರೋಧ [ಲೋಭ] ಮೋಹ ಮದ ಮತ್ಸರವನಳಿಯರು. ಶಿವನ ನೆಲೆಯನರಿಯದೆ, ಎನಗೆ ಗತಿಕೊಡುವ ಲಿಂಗವಿದೇ ಎಂದು ತಿಳಿಯದೆ, ಗ್ರಾಮದ ಹೊರತಾಯದಲ್ಲಿರುವ ದೇವರುಗಳು ಅಧಿಕವೆಂದು ಪೂಜಿಸಿ, ಅವಕಿಕ್ಕಿದ ಕೂಳ ತಾ ತಿಂಬುವನು. ಇನ್ನು ಸೋಮಧರಗರ್ಪಿತವೆಂದು ಭುಂಜಿಸುವವರ ತೆರನಂತೆ ದೊಡ್ಡ ಗ್ರಾಮದ ಸೂಕರನು ಗಂಗೆಯಲ್ಲಿ ಮಿಂದು ಬಂದು ಅಮೇಧ್ಯವ ಭುಂಜಿಸಿದ ತೆರನಾಯಿತೆಂದಾತ ನಮ್ಮ ಅಂಬಿಗರ ಚೌಡಯ್ಯ ನಿಜಶರಣನು.