Index   ವಚನ - 3    Search  
 
ಆನು ನೀನೆಂಬ ಸಂದೇಹ ಗಗನಕ್ಕೆ ಕೈಯನಿಟ್ಟಂತೆ! ಕೈ ಗಗನವ ನುಂಗಿತ್ತೊ, ಗಗನ ಕೈಯ ನುಂಗಿತ್ತೊ ಎಂಬುದ ನಿನ್ನ ನೀ ತಿಳಿದು ತಿಳಿವಿನ ಕಣ್ಣಿಂದ ನೋಡಯ್ಯಾ. ನಿಜಗುಣನೆಂಬ ಆನಂದರತ್ನವ ನುಂಗಿದ ರುಚಿಯನು ಏನೆಂದು ಉಪಮಿಸುವೆ?